Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:5 - ಕನ್ನಡ ಸತ್ಯವೇದವು J.V. (BSI)

5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಶೋಭೆ I ಭೂಮಂಡಲದೊಳು ಹಬ್ಬಿ ಹರಡಲಿ ನಿನ್ನಾ ಪ್ರತಿಭೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:5
10 ತಿಳಿವುಗಳ ಹೋಲಿಕೆ  

ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು; ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಮೆರೆಯುತ್ತದೆ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು