Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:27 - ಕನ್ನಡ ಸತ್ಯವೇದವು J.V. (BSI)

27 ಆಗ ಅವರು ಇದು ನಿನ್ನ ಕೈಕೆಲಸವೆಂದೂ ಯೆಹೋವನಾದ ನೀನೇ ಮಾಡಿದ್ದೆಂದೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನೇ, ಆಗ ಅವರು ಅದು ನಿನ್ನ ಕೈಕೆಲಸವೆಂದೂ ಅದನ್ನು ಮಾಡಿದ್ದು ನೀನೇ ಎಂದೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:27
12 ತಿಳಿವುಗಳ ಹೋಲಿಕೆ  

ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬನ ಕೈಯನ್ನು ಮುದ್ರಿಸುವನು.


ಆಗ ಆ ಜೋಯಿಸರು - ಇದು ದೇವರ ಕೈಕೆಲಸವೇ ಸರಿ ಎಂದು ಫರೋಹನಿಗೆ ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು; ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು