Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:29 - ಕನ್ನಡ ಸತ್ಯವೇದವು J.V. (BSI)

29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:29
9 ತಿಳಿವುಗಳ ಹೋಲಿಕೆ  

ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;


ನನ್ನ ವಿರೋಧಿಗಳೆಲ್ಲರು ಆಶೆಗೆಟ್ಟು ಕಳವಳಗೊಳ್ಳುವರು; ಅವರು ಫಕ್ಕನೆ ಆಶಾಭಂಗಪಟ್ಟು ಹಿಂದಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು