Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:4 - ಕನ್ನಡ ಸತ್ಯವೇದವು J.V. (BSI)

4 ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:4
14 ತಿಳಿವುಗಳ ಹೋಲಿಕೆ  

ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?


ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು