Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:6 - ಕನ್ನಡ ಸತ್ಯವೇದವು J.V. (BSI)

6 ದುಷ್ಟಾಧಿಕಾರಿಯನ್ನು ಅವನ ಮೇಲೆ ನೇವಿುಸು; ತಪ್ಪುಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:6
5 ತಿಳಿವುಗಳ ಹೋಲಿಕೆ  

ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು