Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:2 - ಕನ್ನಡ ಸತ್ಯವೇದವು J.V. (BSI)

2 ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 “ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:2
18 ತಿಳಿವುಗಳ ಹೋಲಿಕೆ  

ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.


ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.


ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.


ಯೆಹೋವನೇ, ಒಳ್ಳೆಯವರೂ ಯಥಾರ್ಥಚಿತ್ತರೂ ಆಗಿರುವವರಿಗೆ ಉಪಕಾರಮಾಡು.


ನೀತಿವಂತರಿಗೋಸ್ಕರ ಪ್ರಕಾಶವೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಬಿತ್ತಲ್ಪಟ್ಟಿವೆ.


ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.


ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳ ಹೃದಯರೆಲ್ಲರೂ ಹಿಗ್ಗುವರು.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.


ದೋಷಿಯು ಮನಸ್ಸನ್ನು ಬೇರೆಮಾಡಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬೊಗ್ಗಿಸಿ ಸಿದ್ಧಮಾಡಿದ್ದಾನೆ.


ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.


ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -


ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು