Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:3 - ಕನ್ನಡ ಸತ್ಯವೇದವು J.V. (BSI)

3 ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ. ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು ಎಂದು ನನಗೆ ಹೇಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಸ್ತಿವಾರಗಳೇ ನಾಶವಾಗುತ್ತಿದ್ದರೆ ನೀತಿವಂತನು ಏನು ಮಾಡಲಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:3
15 ತಿಳಿವುಗಳ ಹೋಲಿಕೆ  

ಇವರು ಬುದ್ಧಿಹೀನರೂ ವಿವೇಕ ಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂವಿುಯ ಅಸ್ತಿವಾರಗಳೆಲ್ಲಾ ಕದಲುತ್ತವೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಎಲ್ಲಾ ನಿವಾಸಿಗಳೊಡನೆ ಭೂವಿುಯು ಕರಗಿಹೋದರೂ ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ [ಎಂಬದು]. ಸೆಲಾ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು