Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:6 - ಕನ್ನಡ ಸತ್ಯವೇದವು J.V. (BSI)

6 ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:6
25 ತಿಳಿವುಗಳ ಹೋಲಿಕೆ  

ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವದು, [ನನ್ನ] ರೋಷದಿಂದ ಆನೆಕಲ್ಲುಗಳು ಸುರಿಯುವವು;


ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.


ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಅವನ ಹೊಟ್ಟೆ ತುಂಬುವದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ಅವನಿಗೆ ಸಂಬಂಧಿಗಳಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವದು.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.


ಆತನು ಅವರ ದೇಶದಲ್ಲಿ ಕಲ್ಮಳೆಯನ್ನೂ ಬೆಂಕಿಯುರಿಯನ್ನೂ ಬರಮಾಡಿ


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು ಅನ್ನಲು


ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣು ಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.


ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.


ನೆಲದ ಮೇಲೆ ಪಾಶವೂ ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವವು.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು