ಕೀರ್ತನೆಗಳು 110:3 - ಕನ್ನಡ ಸತ್ಯವೇದವು J.V. (BSI)3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು. ಅಧ್ಯಾಯವನ್ನು ನೋಡಿ |