Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:5
23 ತಿಳಿವುಗಳ ಹೋಲಿಕೆ  

ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.


ಸರ್ವಶಕ್ತನು ಅಲ್ಲಿ ರಾಜರನ್ನು ಚದರಿಸಿದಾಗ ಸಲ್ಮೋನಿನ ಮೇಲೆ ಹಿಮವು ಬಿದ್ದಿತು.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.


ನನ್ನನ್ನು ಎದುರಿಸಿ ಕೀಳುಮಾತಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲ ಇದೇ.


ನೀನು ಸಿಟ್ಟಿನಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ, ಕೋಪದಿಂದ ಜನಾಂಗಗಳನ್ನು ಒಕ್ಕುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು