Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 111:5 - ಕನ್ನಡ ಸತ್ಯವೇದವು J.V. (BSI)

5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 111:5
13 ತಿಳಿವುಗಳ ಹೋಲಿಕೆ  

ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಆ ವಿಜ್ಞಾಪನೆಗಳಲ್ಲಿ ನಾನು - ಯೆಹೋವನೇ, ಮಹೋನ್ನತನೂ ಭಯಂಕರನೂ ಆಗಿರುವ ಪರಲೋಕದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು