Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:10 - ಕನ್ನಡ ಸತ್ಯವೇದವು J.V. (BSI)

10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:10
15 ತಿಳಿವುಗಳ ಹೋಲಿಕೆ  

ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.


ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ.


ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವದು.


ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ತನ್ನ ಮಲದ ಹಾಗೆ ನಿತ್ಯನಾಶನವನ್ನು ಹೊಂದುವನು, ಅವನನ್ನು ಕಂಡವರು ಕೂಡ ಅವನೆಲ್ಲಿಯೋ ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು