Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:3 - ಕನ್ನಡ ಸತ್ಯವೇದವು J.V. (BSI)

3 ಅವನ ಮನೆಯಲ್ಲಿ ಧನೈಶ್ವರ್ಯಗಳಿರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ಕುಟುಂಬದವರು ಐಶ್ವರ್ಯವಂತರಾಗುವರು. ಅವನ ನೀತಿಯು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:3
17 ತಿಳಿವುಗಳ ಹೋಲಿಕೆ  

ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ; ದುಷ್ಟನ ಆದಾಯವು ಕಳವಳವೇ.


ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಜ್ಞಾನವೂ ತಿಳುವಳಿಕೆಯೂ ರಕ್ಷಣ ಕಾರ್ಯಸಮೃದ್ಧಿಯೂ ಇರುವದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವದು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆತನ ಕಾರ್ಯವು ಘನಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವದು.


ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.


ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವದಿಲ್ಲ;


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಮೇಲಿಗೂ ಕಡಿಮೆಯಿಲ್ಲ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು