Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:6 - ಕನ್ನಡ ಸತ್ಯವೇದವು J.V. (BSI)

6 ಆಕಾಶವನ್ನೂ ಭೂವಿುಯನ್ನೂ ನೋಡಲಿಕ್ಕೆ ಬಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:6
9 ತಿಳಿವುಗಳ ಹೋಲಿಕೆ  

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.


ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.


ಆಹಾ, ಆತನು ತನ್ನ ಪರಿಚಾರಕರಲ್ಲಿಯೂ ನಂಬಿಕೆಯನ್ನಿಡುವದಿಲ್ಲ, ತನ್ನ ದೂತರ ಮೇಲೆಯೂ ತಪ್ಪುಹೊರಿಸುತ್ತಾನೆ.


ಆತನೊಬ್ಬನೇ ಭೂವಿುಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.


ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು