Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:1 - ಕನ್ನಡ ಸತ್ಯವೇದವು J.V. (BSI)

1 ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿಸತ್ಯತೆಗಳ ನಿವಿುತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:1
17 ತಿಳಿವುಗಳ ಹೋಲಿಕೆ  

ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಕೆಡಬಾರದಷ್ಟೆ; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!


ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.


ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ.


ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು