Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:3 - ಕನ್ನಡ ಸತ್ಯವೇದವು J.V. (BSI)

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದುದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಬಯಸಿದ್ದನ್ನೆಲ್ಲಾ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:3
13 ತಿಳಿವುಗಳ ಹೋಲಿಕೆ  

ಯೆಹೋವನು ಭೂವಿುಯಲ್ಲಿಯೂ ಆಕಾಶದಲ್ಲಿಯೂ ಸಮುದ್ರಗಳಲ್ಲಿಯೂ ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.


ದೇವರ ಇಷ್ಟವನ್ನು ಎದುರಿಸುವವರು ಇಲ್ಲದಿರುವಲ್ಲಿ ಆತನು ತಪ್ಪುಹಿಡಿಯುವದು ಹೇಗೆ ಎಂದು ನನ್ನನ್ನು ಕೇಳುವಿ.


ಪರಲೋಕದಲ್ಲಿ ಆಸನಾರೂಢನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು.


ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು