Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನ್ನ ಮೊರೆಯನ್ನು ಕೇಳಿದ್ದರಿಂದ ನಾನು ಆತನನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ; ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:1
20 ತಿಳಿವುಗಳ ಹೋಲಿಕೆ  

ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ.


ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.


ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಯೆಹೋವನು ಆ ಪ್ರಾರ್ಥನೆಯನ್ನು ಕೇಳಿ ಇಸ್ರಾಯೇಲ್ಯರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಲಾಗಿ ಅವರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಶೇಷವಾಗಿ ನಾಶಮಾಡಿಬಿಟ್ಟರು. ಆದದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ಆತನು ಅವನಿಗೆ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.


ನಾನು ಏನು ಹೇಳಲಿ! ಆತನು ನನಗೆ ಮಾತು ಕೊಟ್ಟು ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.


ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)


ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು