Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:22 - ಕನ್ನಡ ಸತ್ಯವೇದವು J.V. (BSI)

22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:22
8 ತಿಳಿವುಗಳ ಹೋಲಿಕೆ  

ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?


ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು