Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:100 - ಕನ್ನಡ ಸತ್ಯವೇದವು J.V. (BSI)

100 ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

100 ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

100 ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

100 ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

100 ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:100
11 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದೀರ್ಘಾಯುವೂ ವಿವೇಕವೂ ಒಂದೇನೋ?


ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ಅವರು ತನಗಿಂತ ವೃದ್ಧರಾಗಿದ್ದ ಕಾರಣ ಎಲೀಹು ಯೋಬನೊಂದಿಗೆ ಮೊದಲು ಮಾತಾಡದೆ ತಡೆದಿದ್ದನು.


ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು