Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:117 - ಕನ್ನಡ ಸತ್ಯವೇದವು J.V. (BSI)

117 ನೀನು ನನಗೆ ಆಧಾರವಾಗಿರು; ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

117 ನೀನು ನನಗೆ ಆಧಾರವಾಗಿರು, ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

117 ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

117 ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

117 ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:117
13 ತಿಳಿವುಗಳ ಹೋಲಿಕೆ  

ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ ಆಶಾಭಂಗಪಡೆನು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.


ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸುವದು; ನಿನ್ನ ಬಲಗೈ ನನ್ನನ್ನು ಹಿಡಿದಿರುವದು.


ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ ಎಂದು ನಿನಗೆ ಹೇಳುವ ನಿನ್ನ ದೇವರಾದ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.


ನಿನ್ನ ಆಜ್ಞೆಗಳಿಗಾಗಿಯೇ ಕೈಯೊಡ್ಡುತ್ತೇನೆ, ಅವು ನನಗೆ ಇಷ್ಟವಾಗಿವೆ; ನಿನ್ನ ನಿಬಂಧನೆಗಳನ್ನು ಧ್ಯಾನಿಸುವೆನು.


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು