Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:120 - ಕನ್ನಡ ಸತ್ಯವೇದವು J.V. (BSI)

120 ನಿನ್ನ ಭಯದಿಂದ ನನ್ನ ಮಾಂಸವು ಕಂಪಿಸುತ್ತದೆ; ನಿನ್ನ ವಿಧಿಗಳಿಗೆ ಅಂಜಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

120 ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

120 ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

120 ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

120 ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:120
20 ತಿಳಿವುಗಳ ಹೋಲಿಕೆ  

ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು - ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ಮೂಷೀಯ ಮಕ್ಕಳು - ಮಹ್ಲೀ, ಏದೆರ್, ಯೆರೀಮೋತ್ ಎಂಬವರು.


ಅರಸನು ಧರ್ಮೋಪದೇಶಗ್ರಂಥವಾಕ್ಯಗಳನ್ನು ಕೇಳಿದಾಗ


ಆದಕಾರಣ ನಾನು ಆತನ ಸನ್ನಿಧಿಗೆ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಅಂಜುತ್ತೇನೆ.


ದೇವರಿಂದ ಬರುವ ವಿಪತ್ತಿಗೆ ಅಂಜಿಕೊಂಡಿದ್ದೆನಷ್ಟೆ, ಆತನ ಪ್ರಭಾವದ ದೆಸೆಯಿಂದ ನಾನು ಇಂಥ ಕೃತ್ಯವನ್ನು ಮಾಡುವದಕ್ಕಾಗಲಿಲ್ಲ.


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದದೆ. ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು