Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:123 - ಕನ್ನಡ ಸತ್ಯವೇದವು J.V. (BSI)

123 ನಿನ್ನ ರಕ್ಷಣೆಯನ್ನೂ ನಿನ್ನ ನೀತಿಯುಳ್ಳ ನುಡಿಯು ನೆರವೇರುವದನ್ನೂ ನಿರೀಕ್ಷಿಸುತ್ತಾ ನನ್ನ ದೃಷ್ಟಿ ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

123 ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ, ನನ್ನ ದೃಷ್ಟಿ ಮೊಬ್ಬಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

123 ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

123 ನಿನ್ನ ರಕ್ಷಣೆಗಾಗಿಯೂ ನಿನ್ನ ಒಳ್ಳೆಯ ಮಾತಿಗಾಗಿಯೂ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

123 ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ, ನನ್ನ ಕಣ್ಣುಗಳು ಮಂದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:123
6 ತಿಳಿವುಗಳ ಹೋಲಿಕೆ  

ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುವದಕ್ಕಿಂತ ವಿಶೇಷವಾಗಿ ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ; ನಿನ್ನ ನುಡಿಗನುಸಾರವಾಗಿ ರಕ್ಷಣೆಯುಂಟಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು