Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:131 - ಕನ್ನಡ ಸತ್ಯವೇದವು J.V. (BSI)

131 ನಾನು ಬಾಯ್ದೆರೆದು ಏದುತ್ತಿದ್ದೇನೆ; ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

131 ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

131 ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

131 ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ನಿಜವಾಗಿಯೂ ಇಷ್ಟ. ನಾನು ಏದುಸಿರುಬಿಡುತ್ತಾ ಲವಲವಿಕೆಯಿಂದ ನಿನ್ನ ಆಜ್ಞೆಗಳಿಗಾಗಿ ಕಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

131 ನಿಮ್ಮ ಆಜ್ಞೆಗಳಿಗಾಗಿರುವ ಬಯಕೆಯು, ನಾನು ಬಾಯಿತೆರೆದು ಹಂಬಲಿಸುವಂತೆ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:131
11 ತಿಳಿವುಗಳ ಹೋಲಿಕೆ  

ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು