Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:136 - ಕನ್ನಡ ಸತ್ಯವೇದವು J.V. (BSI)

136 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

136 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

136 ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

136 ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

136 ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:136
11 ತಿಳಿವುಗಳ ಹೋಲಿಕೆ  

ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.


ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು