Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:145 - ಕನ್ನಡ ಸತ್ಯವೇದವು J.V. (BSI)

145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು; ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

145 ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

145 ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

145 ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದುತ್ತರವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

145 ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:145
14 ತಿಳಿವುಗಳ ಹೋಲಿಕೆ  

ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಕೊಳ್ಳುವೆನು.


ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.


ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು -


ನಿನ್ನ ನಿಬಂಧನೆಗಳನ್ನು ಅನುಸರಿಸುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು