Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:153 - ಕನ್ನಡ ಸತ್ಯವೇದವು J.V. (BSI)

153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು; ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

153 ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:153
14 ತಿಳಿವುಗಳ ಹೋಲಿಕೆ  

ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ; ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವದಿಲ್ಲ.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.


ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಾನು ಅಲ್ಪನೂ ತಿರಸ್ಕಾರಹೊಂದಿದವನೂ ಆಗಿದ್ದೇನೆ; ಆದರೂ ನಿನ್ನ ನೇಮಗಳನ್ನು ಮರೆಯುವದಿಲ್ಲ.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ.


ನನಗೆ ಎಷ್ಟೋ ಮಂದಿ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರದಿಂದ ನನ್ನನ್ನು ಹಗೆಮಾಡುತ್ತಾರೆ.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.


ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ; ಸದಾಕಾಲವೂ ಅವೇ ನನಗಿವೆ.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು