Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:160 - ಕನ್ನಡ ಸತ್ಯವೇದವು J.V. (BSI)

160 ನಿನ್ನ ವಾಕ್ಯದ ಸಾರಾಂಶವು ಸತ್ಯವೇ; ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಕ್ಕೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

160 ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

160 ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

160 ನಿನ್ನ ವಾಕ್ಯಗಳೆಲ್ಲಾ ಸತ್ಯವಾಗಿವೆ. ನಿನ್ನ ನೀತಿಯ ಕಟ್ಟಳೆಗಳು ಶಾಶ್ವತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

160 ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ; ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:160
10 ತಿಳಿವುಗಳ ಹೋಲಿಕೆ  

ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.


ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ನಿನ್ನ ನೀತಿಯು ನಿತ್ಯವಾದದ್ದೇ; ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.


ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದೀ ಎಂದು ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.


ನೀತಿಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದೀ;


ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ; ಅವರು ಮೋಸದಿಂದ ಹಿಂಸಿಸುತ್ತಾರೆ; ನನಗೆ ಸಹಾಯ ಮಾಡು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು