Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು; ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಸೇವಕನಾದ ನನ್ನ ಮೇಲೆ ದಯವಿಡು, ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸೇವಕನಾದ ನನಗೆ ದಯೆತೋರು. ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ ನಿಮ್ಮ ಸೇವಕನ ಮೇಲೆ ದಯೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:17
19 ತಿಳಿವುಗಳ ಹೋಲಿಕೆ  

ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ನಿನ್ನ ಸೇವಕನನ್ನು ಕೃಪೆಯಿಂದ ನಡಿಸು; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದೀ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು; ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ನನ್ನ ಪ್ರಾಣವನ್ನು ಉಳಿಸು; ಅದು ನಿನ್ನನ್ನು ಕೊಂಡಾಡಲಿ. ನಿನ್ನ ವಿಧಿಗಳಿಂದ ನನಗೆ ಸಹಾಯವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು