Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:20 - ಕನ್ನಡ ಸತ್ಯವೇದವು J.V. (BSI)

20 ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ನಿಯಮಗಳನ್ನು ಯಾವಾಗಲೂ ಹಂಬಲಿಸುತ್ತಿರುವುದರಿಂದ, ನನ್ನ ಪ್ರಾಣವು ಕರಗಿಹೋಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:20
13 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ನಾನು ಬಾಯ್ದೆರೆದು ಏದುತ್ತಿದ್ದೇನೆ; ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಆಶಿಸುತ್ತೇನೆ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ವಿುತ್ರನ ಪ್ರೀತಿಯು ನಿರಂತರ; ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಅವನು ಸರ್ವಶಕ್ತನಲ್ಲಿ ಆನಂದಪಟ್ಟು ಆತನನ್ನು ಸರ್ವದಾ ಪ್ರಾರ್ಥಿಸುವನೇ?


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.


ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು