Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:22 - ಕನ್ನಡ ಸತ್ಯವೇದವು J.V. (BSI)

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದ ನನಗಿರುವ ನಿಂದಾಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿನ್ನ ಕಟ್ಟಳೆಗಳನು ಕೈಗೊಂಡು ನಡೆವವನು ನಾನು I ನನಗಿರುವ ನಿಂದಾಪಮಾನಗಳನು ತೊಲಗಿಸು ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನನ್ನು ಅವಮಾನಕ್ಕೂ ನಾಚಿಕೆಗೂ ಗುರಿಮಾಡಬೇಡ. ನಾನು ನಿನ್ನ ಒಡಂಬಡಿಕೆಗೆ ವಿಧೇಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:22
18 ತಿಳಿವುಗಳ ಹೋಲಿಕೆ  

ನನ್ನ ಅವಮಾನವನ್ನು ತೊಲಗಿಸು; ಅದಕ್ಕೋಸ್ಕರ ಅಂಜುತ್ತಿದ್ದೇನೆ. ನಿನ್ನ ವಿಧಿಗಳು ಹಿತಕರವಾಗಿವೆ.


ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆ ಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.


ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.


ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು; ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;


ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು