Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:24 - ಕನ್ನಡ ಸತ್ಯವೇದವು J.V. (BSI)

24 ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:24
16 ತಿಳಿವುಗಳ ಹೋಲಿಕೆ  

ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು; ನಿನ್ನ ವಾಕ್ಯವನ್ನು ಮರೆಯುವದಿಲ್ಲ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ಅವುಗಳ ಮೂಲಕ ನಿನ್ನ ದಾಸನಿಗೆ ಎಚ್ಚರಿಕೆಯಾಗುತ್ತದೆ; ಅವುಗಳನ್ನು ಕೈಕೊಳ್ಳುವದರಿಂದ ಬಹಳ ಫಲ ಉಂಟಾಗುತ್ತದೆ.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ಕಷ್ಟಸಂಕಟಗಳು ನನ್ನನ್ನು ಹಿಡಿದವೆ; ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


[ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಅವನು ಸರ್ವಶಕ್ತನಲ್ಲಿ ಆನಂದಪಟ್ಟು ಆತನನ್ನು ಸರ್ವದಾ ಪ್ರಾರ್ಥಿಸುವನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು