Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:32 - ಕನ್ನಡ ಸತ್ಯವೇದವು J.V. (BSI)

32 ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿನ್ನ ಆಜ್ಞೆಗಳಿಗೆ ಹರ್ಷದಿಂದ ವಿಧೇಯನಾಗುವೆನು. ನಿನ್ನ ಆಜ್ಞೆಗಳು ನನ್ನನ್ನು ಉಲ್ಲಾಸಗೊಳಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:32
17 ತಿಳಿವುಗಳ ಹೋಲಿಕೆ  

ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಕೊರಿಂಥದವರೇ, ನಾವು ನಿಮ್ಮೊಡನೆ ಧಾರಾಳವಾಗಿ ಮಾತಾಡುತ್ತಾ ಇದ್ದೇವೆ; ನಮ್ಮ ಹೃದಯವು ನಿಮ್ಮ ವಿಷಯದಲ್ಲಿ ವಿಶಾಲವಾಯಿತು.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.


ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು