Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:34 - ಕನ್ನಡ ಸತ್ಯವೇದವು J.V. (BSI)

34 ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:34
26 ತಿಳಿವುಗಳ ಹೋಲಿಕೆ  

ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ.


ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ ಇಸ್ರಾಯೇಲ್ಯರನ್ನು ಆಳುವದಕ್ಕೆ ನಿನ್ನನ್ನು ನೇವಿುಸಲಿ.


ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.


ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.


ನಿನ್ನ ನೇಮಗಳ ಮೂಲಕ ವಿವೇಕಿಯಾದೆನು; ವಿುಥ್ಯಾಮಾರ್ಗವನ್ನೆಲ್ಲಾ ಹಗೆಮಾಡುತ್ತೇನೆ.


ನಾನು ನಿನ್ನ ಸೇವಕನು; ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.


ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ; ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು