Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:40 - ಕನ್ನಡ ಸತ್ಯವೇದವು J.V. (BSI)

40 ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ, ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು. ವಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:40
20 ತಿಳಿವುಗಳ ಹೋಲಿಕೆ  

ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು; ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಯಾಕಂದರೆ ಶರೀರಭಾವವು ಅಭಿಲಾಷಿಸುವದು ಆತ್ಮನಿಗೆ ವಿರುದ್ಧವಾಗಿದೆ, ಆತ್ಮನು ಅಭಿಲಾಷಿಸುವದು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಫಿಸುವದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ; ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.


ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು; ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ; ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಿನ್ನ ಕೃಪೆಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು; ಆಗ ನೀನು ಉಸಿರಿದ ಕಟ್ಟಳೆಯನ್ನು ಕೈಕೊಳ್ಳುವೆನು.


ಪ್ರಿಯನೇ, ನೀನು ಆತ್ಮ ವಿಷಯದಲ್ಲಿ ಅಭಿವೃದ್ಧಿಹೊಂದಿರುವ ಪ್ರಕಾರ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿರಬೇಕೆಂದು ಪ್ರಾರ್ಥಿಸುತ್ತೇನೆ.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಕೂಡಲೆ ಆ ಹುಡುಗನ ತಂದೆಯು - ನಂಬುತ್ತೇನೆ, ನನಗೆ ನಂಬಿಕೆ ಕಡಿಮೆಯಾಗಿದ್ದರೂ ಸಹಾಯಮಾಡು ಎಂದು ಕೂಗಿ ಹೇಳಿದನು.


ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು