Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:41 - ಕನ್ನಡ ಸತ್ಯವೇದವು J.V. (BSI)

41 ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ; ನಿನ್ನ ನುಡಿಗನುಸಾರವಾಗಿ ರಕ್ಷಣೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ, ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:41
10 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.


ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ; ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ; ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.


ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.


ನಿನ್ನ ರಕ್ಷಣೆಯನ್ನೂ ನಿನ್ನ ನೀತಿಯುಳ್ಳ ನುಡಿಯು ನೆರವೇರುವದನ್ನೂ ನಿರೀಕ್ಷಿಸುತ್ತಾ ನನ್ನ ದೃಷ್ಟಿ ಮೊಬ್ಬಾಯಿತು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು