Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:5
11 ತಿಳಿವುಗಳ ಹೋಲಿಕೆ  

ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು.


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳಿಗೆ ತಿರುಗಿಸು.


ನೀನು ನನ್ನ ಅಂತರಾತ್ಮವನ್ನು ಬಿಡುಗಡೆಮಾಡು; ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.


ನಿನ್ನ ನೇಮಗಳನ್ನು ಆರಿಸಿಕೊಂಡಿದ್ದೇನೆ; ನಿನ್ನ ಕೈ ನನಗೆ ನೆರವಾಗಲಿ.


ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ನಾನು ಬಾಯ್ದೆರೆದು ಏದುತ್ತಿದ್ದೇನೆ; ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಆಶಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು