Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:57 - ಕನ್ನಡ ಸತ್ಯವೇದವು J.V. (BSI)

57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:57
16 ತಿಳಿವುಗಳ ಹೋಲಿಕೆ  

ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ಜನರು ಯೆಹೋಶುವನಿಗೆ - ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು ಅಂದರು.


ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.


ಇಕ್ಕಟ್ಟಿನ ವೇಳೆಯಲ್ಲಿ ನನ್ನ ತುಟಿಗಳು ಬಿಚ್ಚಿ ಬಾಯಿ ಉಚ್ಚರಿಸಿದ ಹರಕೆಗಳನ್ನು ನಿನಗೆ ಸಲ್ಲಿಸುವೆನು.


ಸ್ವದೇಶಸ್ಥರೊಂದಿಗೆ ಅವರಿಗೆ ಸ್ವಾಸ್ತ್ಯವು ದೊರೆಯುವದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವಾಸ್ತ್ಯವು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು