Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:7 - ಕನ್ನಡ ಸತ್ಯವೇದವು J.V. (BSI)

7 ನಾನು ನಿನ್ನ ನೀತಿವಿಧಿಗಳನ್ನು ಕಲಿತಹಾಗೆಲ್ಲಾ ನಿನ್ನನ್ನು ಯಥಾರ್ಥಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀತಿಯುತ ನಿನ್ನ ವಿಧಿಗಳನು ಕಲಿಯುವೆನಯ್ಯಾ I ಯಥಾರ್ಥ ಹೃದಯದಿಂದ ನಿನ್ನ ಸ್ತುತಿಪೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:7
16 ತಿಳಿವುಗಳ ಹೋಲಿಕೆ  

ನನ್ನ ತುಟಿಗಳಿಂದ ಸ್ತುತಿ ಹೊರಡಲಿ; ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದೀಯಲ್ಲಾ.


ಸ್ತುತಿಪಾತ್ರನಾದ ಯೆಹೋವನೇ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.


ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.


ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.


ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


ಯೆಹೋವನೇ, ಭೂಲೋಕವು ನಿನ್ನ ಕೃಪೆಯಿಂದ ಪೂರ್ಣವಾಗಿದೆ. ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ನಿನ್ನ ಸೇವಕನನ್ನು ಕೃಪೆಯಿಂದ ನಡಿಸು; ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು