Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:75 - ಕನ್ನಡ ಸತ್ಯವೇದವು J.V. (BSI)

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ ನೀನು ನಂಬಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

75 ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

75 ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

75 ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

75 ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:75
13 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ; ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಕ್ಕೂ ಇರುವವು.


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು ಮಧ್ಯರಾತ್ರಿಯಲ್ಲಿ ಏಳುವೆನು.


ನಾನು ನಿನ್ನ ನೀತಿವಿಧಿಗಳನ್ನು ಕಲಿತಹಾಗೆಲ್ಲಾ ನಿನ್ನನ್ನು ಯಥಾರ್ಥಹೃದಯದಿಂದ ಕೊಂಡಾಡುತ್ತಾ ಹೋಗುವೆನು.


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಆತನು ಮನುಷ್ಯನ ಮೇಲೆ ಹೆಚ್ಚು ಗಮನವಿಡುವದೂ ಮನುಷ್ಯನು ಆತನ ನ್ಯಾಯವಿಚಾರಣೆಗೆ ಬರುವದೂ ಅವಶ್ಯವಿಲ್ಲ.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು