Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:81 - ಕನ್ನಡ ಸತ್ಯವೇದವು J.V. (BSI)

81 ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

81 ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

81 ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

81 ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

81 ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:81
15 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ; ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.


ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು; ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ.


ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ; ನಿನ್ನ ನುಡಿಗನುಸಾರವಾಗಿ ರಕ್ಷಣೆಯುಂಟಾಗಲಿ.


ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.


ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು