Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:86 - ಕನ್ನಡ ಸತ್ಯವೇದವು J.V. (BSI)

86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ; ಅವರು ಮೋಸದಿಂದ ಹಿಂಸಿಸುತ್ತಾರೆ; ನನಗೆ ಸಹಾಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ, ಅವರು ಮೋಸದಿಂದ ಹಿಂಸಿಸುತ್ತಾರೆ, ನನಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

86 ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

86 ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

86 ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:86
17 ತಿಳಿವುಗಳ ಹೋಲಿಕೆ  

ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಶೀಘ್ರವಾಗಿ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಗರ್ವಿಷ್ಠರು ಮಾನಭಂಗಹೊಂದಲಿ; ಅವರು ಮೋಸದಿಂದ ನನಗೆ ಕೇಡುಮಾಡಿದ್ದಾರೆ. ನಾನಾದರೋ ನಿನ್ನ ನೇಮಗಳನ್ನು ಧ್ಯಾನಿಸುತ್ತಿರುವೆನು.


ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.


ಯೆಹೋವನೇ, ನೀನು ನನ್ನ ಹತ್ತಿರವೇ ಇದ್ದೀ; ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.


ನೀತಿಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದೀ;


ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ನಿನ್ನ ನೀತಿಯು ನಿತ್ಯವಾದದ್ದೇ; ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಯೆಹೋವನೇ, ನಿನ್ನನ್ನೇ ಮರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.


ನನ್ನ ಶತ್ರುಗಳು ಚುರುಕಾದವರೂ ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹುಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು