Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:87 - ಕನ್ನಡ ಸತ್ಯವೇದವು J.V. (BSI)

87 ನನ್ನನ್ನು ಭೂವಿುಯಿಂದ ತೆಗೆದೇಬಿಟ್ಟಿದ್ದರು; ಆದರೆ ನಾನು ನಿನ್ನ ನೇಮಗಳನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

87 ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು, ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

87 ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

87 ಅವರು ನನ್ನನ್ನು ನಾಶಮಾಡಿಯೇ ಬಿಟ್ಟಿದ್ದರು. ನಾನಾದರೋ ನಿನ್ನ ನಿಯಮಗಳನ್ನು ಮರೆತುಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

87 ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು, ಆದರೆ ನಾನು ನಿಮ್ಮ ಸೂತ್ರಗಳನ್ನು ತಿರಸ್ಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:87
10 ತಿಳಿವುಗಳ ಹೋಲಿಕೆ  

ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.


ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.


ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು