Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:90 - ಕನ್ನಡ ಸತ್ಯವೇದವು J.V. (BSI)

90 ನಿನ್ನ ಸತ್ಯತೆಯು ತಲತಲಾಂತರಕ್ಕೂ ಇರುವದು. ನೀನು ಭೂವಿುಯನ್ನು ಸ್ಥಾಪಿಸಿರುತ್ತೀ; ಅದು ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

90 ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

90 ನಿನ್ನ ನಂಬಿಗಸ್ತಿಕೆಯು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸೃಷ್ಟಿಸಿದೆ; ಅದು ಇಂದಿಗೂ ಸ್ಥಿರವಾಗಿ ನಿಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

90 ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:90
12 ತಿಳಿವುಗಳ ಹೋಲಿಕೆ  

ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಅವನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ; ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ಆಕಾಶವು ನಿನ್ನದು, ಭೂವಿುಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವದೆಲ್ಲವನ್ನೂ ನಿರ್ಮಿಸಿದವನು ನೀನು.


ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ


ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು.


ಭೂವಿುಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು