Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:94 - ಕನ್ನಡ ಸತ್ಯವೇದವು J.V. (BSI)

94 ನಾನು ನಿನ್ನವನು, ರಕ್ಷಿಸು. ನಿನ್ನ ನೇಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

94 ನಾನು ನಿನ್ನವನು, ರಕ್ಷಿಸು, ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

94 ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

94 ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

94 ನನ್ನನ್ನು ರಕ್ಷಿಸಿರಿ, ಏಕೆಂದರೆ ನಾನು ನಿಮ್ಮವನೇ; ನಿಮ್ಮ ಸೂತ್ರಗಳನ್ನು ನಾನು ಹುಡುಕಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:94
17 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನಿನ್ನ ನೇಮಗಳ ದಾರಿಯನ್ನು ತಿಳಿಯಪಡಿಸು; ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.


ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.


[ಅನ್ಯಜನರಲ್ಲಿ] ಒಬ್ಬನು - ನಾನು ಯೆಹೋವನ ಭಕ್ತನು ಎಂದು ಹೇಳಿಕೊಳ್ಳುವನು; ಇನ್ನೊಬ್ಬನು ಯಾಕೋಬ್ಯನು ಎನಿಸಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಯೆಹೋವದಾಸನು ಎಂದು ಬರೆದುಕೊಂಡು ಇಸ್ರಾಯೇಲ್ಯನೆಂಬ ಬಿರುದನ್ನು ಧರಿಸಿಕೊಳ್ಳುವನು.


ನಿನ್ನ ನೇಮಗಳನ್ನು ಆರಿಸಿಕೊಂಡಿದ್ದೇನೆ; ನಿನ್ನ ಕೈ ನನಗೆ ನೆರವಾಗಲಿ.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನಿನಗೇ ಮೊರೆಯಿಟ್ಟಿದ್ದೇನೆ; ರಕ್ಷಿಸು. ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.


ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ; ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು