Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:97 - ಕನ್ನಡ ಸತ್ಯವೇದವು J.V. (BSI)

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

97 ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

97 ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

97 ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:97
14 ತಿಳಿವುಗಳ ಹೋಲಿಕೆ  

ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು.


ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವದು, ತಿಳುವಳಿಕೆಯು ನಿನ್ನ ಆತ್ಮಕ್ಕೆ ಅಂದವಾಗಿರುವದು.


ಯೆಹೋವನೇ, ನೋಡು, ನಿನ್ನ ನೇಮಗಳು ನನಗೆ ಎಷ್ಟೋ ಪ್ರಿಯವಾಗಿವೆ; ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ನಿನ್ನ ಆಜ್ಞೆಗಳಿಗಾಗಿಯೇ ಕೈಯೊಡ್ಡುತ್ತೇನೆ, ಅವು ನನಗೆ ಇಷ್ಟವಾಗಿವೆ; ನಿನ್ನ ನಿಬಂಧನೆಗಳನ್ನು ಧ್ಯಾನಿಸುವೆನು.


ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ; ಅವು ನನಗೆ ಬಹುಪ್ರಿಯವಾಗಿವೆ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುತ್ತದೆ; ಅಂಥವರಿಗೆ ವಿಘ್ನಕರವಾದದ್ದೇನೂ ಇರುವದಿಲ್ಲ.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ಅವನು ಮದದಿಂದ ತನ್ನ ಸ್ವದೇಶದವರನ್ನು ಹಿಯ್ಯಾಳಿಸದೆ ಯೆಹೋವನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳದೆ ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಈ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸುವದಕ್ಕೆ ಅಭ್ಯಾಸ ಮಾಡಿಕೊಳ್ಳುವಂತೆ ಈ ಗ್ರಂಥವು ಅವನ ಬಳಿಯಲ್ಲೇ ಇರಬೇಕು; ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದರಲ್ಲಿ ಓದಿಕೊಳ್ಳುತ್ತಾ ಇರಬೇಕು.


ಚಪಲಚಿತ್ತರನ್ನು ದ್ವೇಷಿಸುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.


ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


ನಿನ್ನ ನೇಮಗಳನ್ನು ಧ್ಯಾನಿಸುತ್ತಾ ನಿನ್ನ ದಾರಿಯನ್ನು ಲಕ್ಷೀಕರಿಸಿಕೊಳ್ಳುವೆನು.


ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ; ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು