Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:98 - ಕನ್ನಡ ಸತ್ಯವೇದವು J.V. (BSI)

98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ; ಸದಾಕಾಲವೂ ಅವೇ ನನಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

98 ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ I ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

98 ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

98 ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:98
12 ತಿಳಿವುಗಳ ಹೋಲಿಕೆ  

ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಿನ್ನ ವಿಧಿಗಳನ್ನು ಮುಂದೆಯೇ ಇಟ್ಟುಕೊಂಡಿದ್ದೇನೆ.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.


ಕೆಟ್ಟವರು ನ್ಯಾಯವನ್ನು ಗ್ರಹಿಸರು; ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು