Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:4 - ಕನ್ನಡ ಸತ್ಯವೇದವು J.V. (BSI)

4 ಶೂರನ ಹದವಾದ ಬಾಣಗಳನ್ನೂ ಜಾಲಿಯ ಕೆಂಡಗಳನ್ನೂ ನಿನಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:4
19 ತಿಳಿವುಗಳ ಹೋಲಿಕೆ  

ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.


ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.


ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ.


ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಸುಳ್ಳುತುಟಿ ಯೆಹೋವನಿಗೆ ಹೇಸು; ಸತ್ಯವಂತರು ಆತನಿಗೆ ಲೇಸು.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ನೆರೆಯವನನ್ನು ಹೀನೈಸುವವನು ಬುದ್ಧಿಹೀನನು; ವಿವೇಕಿಯು ಬಾಯಿಬಿಡನು.


ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು; ಶಿಷ್ಟನು ತಿಳುವಳಿಕೆಯಿಂದ ಉದ್ಧಾರವಾಗುವನು.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ಆತನು ಅದಕ್ಕೆ ಮರಣಕರವಾದ ಅಗ್ನಿ ಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವದಕ್ಕೆ ಗುರಿಯಿಟ್ಟು ನಿಂತಿದ್ದಾನೆ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು; ಹೊಟ್ಟೆಯೊಳಕ್ಕೇ ಇಳಿಯುವವು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು