Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 120:6 - ಕನ್ನಡ ಸತ್ಯವೇದವು J.V. (BSI)

6 ಸಮಾಧಾನವನ್ನು ಹಗೆಮಾಡುವವರೊಳಗೆ ಇದ್ದು ಇದ್ದು ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 120:6
6 ತಿಳಿವುಗಳ ಹೋಲಿಕೆ  

ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು