ಕೀರ್ತನೆಗಳು 123:2 - ಕನ್ನಡ ಸತ್ಯವೇದವು J.V. (BSI)2 ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು. ಅಧ್ಯಾಯವನ್ನು ನೋಡಿ |