Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ಒಳ್ಳೆಯವರೂ ಯಥಾರ್ಥಚಿತ್ತರೂ ಆಗಿರುವವರಿಗೆ ಉಪಕಾರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:4
17 ತಿಳಿವುಗಳ ಹೋಲಿಕೆ  

ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.


ನೀನು ಒಳ್ಳೆಯವನೂ ಒಳ್ಳೆಯದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.


ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ; ಇವರು ನಿರ್ದೋಷಿಗಳಾಗಿದ್ದಾರೆ.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು